ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ -vishwanews24
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ
ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39)ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಉದ್ಯಮಿಯಾಗಿದ್ದ ಅವರು, ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದಲ್ಲಿ ಸಕ್ರಿಯರಾಗಿದ್ದ ಇವರು ಈ ಹಿಂದೆ ಮಂಡಲ ಯುವಮೋರ್ಚಾ ಕಾರ್ಯದರ್ಶಿಯಾಗಿದ್ದರು.
