ಮೂಡುಬಿದಿರೆ: ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಗೋಪಿ (68) ಮೃತಪಟ್ಟ ಮಹಿಳೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಗೋಪಿ ಅವರು ಗಾಯಗೊಂಡಿದ್ದರು. ಮನೆಯಲ್ಲಿದ್ದ ಅವರ ಮಕ್ಕಳೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿದ್ದ ಗೋಪಿ ಅವರನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷ ಜಯಂತ ಹೆಗ್ಡೆ ಸಹಿತ ಕೆಲವರು ಹೊಸ್ಮಾರಿನ ಕ್ಲಿನಿಕ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಿ ಅವರು ಐದು ಮಂದಿ ಗಂಡು ಮಕ್ಕಳನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಭೇಟಿ ನೀಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…