ಮೂಡುಬಿದಿರೆ: ಮತ್ತೆ ನೈತಿಕ ಪೊಲೀಸ್ ಗಿರಿ ; ಮೂವರ ಬಂಧನ – Vishwanews24
ಮೂಡುಬಿದಿರೆ: ಮತ್ತೆ ನೈತಿಕ ಪೊಲೀಸ್ ಗಿರಿ ; ಮೂವರ ಬಂಧನ
ಮೂಡುಬಿದಿರೆ: ಮಂಗಳೂರಿನ ಮೂಡಬಿದ್ರೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಧರ್ಮಿಯ ವಿದ್ಯಾರ್ಥಿ ಮೇಲೆ ಗುಂವೊಂದು ಹಲ್ಲೆ ಮಾಡಿದೆ. ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ನಡೆದಿದ್ದ ಘಟನೆ ನಡೆದಿದ್ದು, ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
