ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ನಡೆದಿದೆ.
ಶಿವರಾಮ (31) ಅವರ ಪತ್ನಿ ಗಂಗಾ (25) ಹಾಗೂ ಅವರ ಮಗ ಆದರ್ಶ್ (6) ಎಂಬುವವರಿಗೆ ಸುಟ್ಟ ಗಾಯಗಳಾಗಿರುತ್ತವೆ.
ಮಂಗಳವಾರ ಬೆಳಗ್ಗೆ ಸುಮಾರು 6:30 ಗಂಟೆಗೆ ಈ ಘಟನೆ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.
ಶಿವರಾಮ ಅವರು ಪತ್ನಿ ಹಾಗೂ ಮಗನೊಂದಿಗೆ ಮಿಜಾರು ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದರು.
ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿರುತ್ತವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…