ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ–ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎನ್ನಲಾಗಿದೆ.
ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…