ಮೂಡುಬಿದಿರೆ : ಇಲ್ಲಿನ ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು (47) ಮೃತಪಟ್ಟಿದ್ದಾರೆ.
ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಾಮನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
26 ವರ್ಷಗಳ ತಿರುಗಾಟ ನಡೆಸಿದ ಅನುಭವಿ ಕಲಾವಿದರಾಗಿದ್ದ ವಾಮನ ಕುಮಾರ್ ಅವರು ಹಾಸ್ಯ, ಸ್ತ್ರೀ, ಪುರುಷ, ಪುಂಡು ಹೀಗೆ ಹಲವು ಪಾತ್ರಗಳನ್ನು ಮಾಡಿ ಅಭಿಮಾನಿಗಳ ಮನಗೆದ್ದಿದ್ದರು . ವಾಮನ್ ಕುಮಾರ್ ಅವರ ಸಾವಿಗೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…