Featured

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ- ವೃದ್ಧನ ಬಂಧನ – Vishwanews24

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ – ವೃದ್ಧನ ಬಂಧನ

ಮೂಡುಬಿದಿರೆ: ಬುಧವಾರ ಇಲ್ಲಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ , ವೃದ್ದನೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಬೈಲೂರಿನವಳಾದ ಬಾಲಕಿ ಹೌದಾಲ್ ನಲ್ಲಿರುವ ತನ್ನ ಚಿಕ್ಕಮ್ಮ ಮನೆಯಲ್ಲಿ ವಾಸವಾಗಿದ್ದು, ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜಿಗೆ ಹೋಗಿ ಬರುತ್ತಿದ್ದ ಬಾಲಕಿಗೆ ಮಂಗಳವಾರ ಕಿವಿ ನೋವು ಕಾಣಿಸಿಕೊಂಡು ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ. ಕಾಲೇಜಿನವರು ಮನೆಯವರಿಗೆ ವಿಷಯ ತಿಳಿಸಿದಾಗ, ಕೆಲಸದ ಒತ್ತಡದಲ್ಲಿದ್ದ ಅವರು ಪರಿಚಯಸ್ಥ ಶ್ರೀಧರ್ ಪುರಾಣಿಕ್ ಜತೆ ಮನೆಗೆ ಕಳುಹಿಸಿಕೊಡುವಂತೆ ಹೇಳಿದ್ದರೆನ್ನಲಾಗಿದೆ. ಸಂತ್ರಸ್ತೆಯ ಪೋಷಕರು ಪುರಾಣಿಕ್ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

ಕಾರಿನಲ್ಲಿ ಬರುವಾಗ ಶ್ರೀಧರ್ ಪುರಾಣಿಕ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮನೆ ಹತ್ತಿರ ಬಂದರೂ ಆಕೆಯನ್ನು ಕಾರಿನಿಂದ ಇಳಿಯಲು ಬಿಡಲಿಲ್ಲ ಎಂದು ದೂರಲಾಗಿದೆ. ಇದರಿಂದ ಮನನೊಂದ ಆಕೆ ಬುಧವಾರ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.

ಈ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಈತನ ವಿರುದ್ದ ಪೊಕ್ಸೋ ಕಾಯಿದೆ , ದಲಿತ ದೌರ್ಜನ್ಯ ತಡೆ ಕಾಯ್ದೆ, ಮತ್ತು ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago