Featured

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಇನ್ನೂ ಬಂಧನವಾಗದ ಆರೋಪಿ ಶಿಕ್ಷಕ ; ಗ್ರಾಮಸ್ಥರ ಅಸಮಾಧಾನ – Vishwanews24

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಇನ್ನೂ ಬಂಧನವಾಗದ ಆರೋಪಿ ಶಿಕ್ಷಕ ; ಗ್ರಾಮಸ್ಥರ ಅಸಮಾಧಾನ

ಮೂಡುಬಿದಿರೆ: ಕಲ್ಲಮುಂಡ್ಕೂರು ಸರಕಾರಿ ಶಾಲೆಯಲ್ಲಿ‌ ನಡೆದಿದ್ದ ಪೋಕ್ಸೊ ಪ್ರಕರಣದಲ್ಲಿ ಇನ್ನೂ ಆರೋಪಿಯ ಬಂಧನವಾಗದಿರುವ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ‌.

ಫೆ.28ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಅಧ್ಯಾಪಕ ಗುರುವ ಮೊಗೇರಾ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳನೀಡಿರುವ ಬಗ್ಗೆ ಮಾ.13ರಂದು ಶಾಲೆಯ ಮುಖ್ಯೋಪಾಧ್ಯಾಯರು ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಮಾ.14ರಂದು ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣವೂ ದಾಖಲಾಗಿತ್ತು.

ಈ ನಡುವೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಮಹಿಳಾ ಠಾಣೆಯ ಪೊಲೀಸರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ್ದರು‌. ಈ ವೇಳೆ ಅಧ್ಯಾಪಕ ಗುರುವ ಮೊಗೇರ ಲೈಂಗಿಕ ಕಿರುಕುಳ ನೀಡಿರುವುದನ್ನು ವಿದ್ಯಾರ್ಥಿನಿಯರು ಬರವಣಿಗೆಯಲ್ಲಿ ನೀಡಿದ್ದರು ಎಂದು ತಿಳಿದು ಬಂದಿದೆ.

ಪೊಲೀಸ್ ಇಲಾಖೆಯ ನಿರ್ಲಕ್ಷ್ಯದ ಪರಿಣಾಮವಾಗಿ ಆರೋಪಿಯ ಬಂಧನವಾಗುತ್ತಿಲ್ಲ. ಈ ಪ್ತಕರಣದಲ್ಲಿ ಸ್ಥಳೀಯರೂ ಮುಂದೆ ಹೋಗಲು ಹೆದರುತ್ತಿದ್ದಾರೆ. ಆರೋಪಿಯ ಸ್ವಜಾತಿಯವರು ಆತನ ಜೊತೆ ನಿಂತಿದ್ದಾರೆ ಎಂಬ ಮಾತುಗಳು ಇವೆ. ದೇವರ ಸಮಾನರಾದ ಮಕ್ಕಳ ಮೇಲೆ ಘೋರ ಕೃತ್ಯ ಎಸಗಿರುವ ಆರೋಪಿಗೆ ಯಾವುದೇ ಸಮುದಾಯ, ಸಂಘಟನೆಗಳು ರಕ್ಷಣೆಗೆ ಮುಂದಾಗಬಾರದು ಎಂದು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದನಂಜಯ ಅವರು ಹೇಳಿದ್ದಾರೆ.

ಮಾ.14ರಂದು ಪ್ರಕರಣ ದಾಖಲಾಗಿದ್ದ ವೇಳೆ ಆರೋಪಿ ಊರಿನಲ್ಲಿ ಆರಾಮವಾಗಿ ಸುತ್ತಾಡಿಕೊಂಡಿದ್ದ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬಳಿಕ ಪೊಲೀಸ್ ಇಲಾಖೆ ಮತ್ತು ಸಂಬಂಧ ಪಟ್ಟ ಇಲಾಖೆಗಳು ಕಾರ್ಯ ಪ್ರವೃತ್ತರಾದವು. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಆತನನ್ನು ಬಂಧಿಸಲು ಮುಂದಾಗದ ಪೊಲೀಸ್ ಇಲಾಖೆ ಈಗ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದು ವಿಪರ್ಯಾಸ ಎಂದು ಕಲ್ಲಮುಂಡ್ಕೂರು ಗ್ರಾಮಸ್ಥರು ಹೇಳಿದ್ದಾರೆ‌.

“ಆರೋಪಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿರುವುದು ವಿದ್ಯಾರ್ಥಿನಿಯರ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ‌. ಈತ ಈ ಹಿಂದೆಯೂ ಇಂತಹ ಕೃತ್ಯ ಎಸಗಿರುವುದು ಶಾಲೆಯ ಹಳೆ ವಿದ್ಯಾರ್ಥಿನಿಯರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆ ಗಳಿಂದ ತಿಳಿಯುತ್ತಿದೆ. ಈತ ಅಂತರಾಷ್ಟ್ರೀಯ ಮಟ್ಟದ ಆರೋಪಿ ಏನೂ ಅಲ್ಲ. ಹೀಗಿರುವಾಗ ಆತನನ್ನು ಪೊಲೀಸ್ ಇಲಾಖೆ ಹಲವು ದಿನಗಳಿಂದ ಶೋಧ ನಡೆಸುತ್ತಿದ್ದರೂ ಬಂಧನ ಸಾಧ್ಯವಾಗದಿರುವುದು ಪೊಲೀಸರ ನಿರ್ಲಕ್ಷ್ಯವನ್ನು ತೋರಿಸುತ್ತಿದೆ”.

– ದಯಾನಂದ, ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ

“ಸಧ್ಯ ಪೊಲೀಸರ ತಂಡಗಳು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿವೆ. ಶೀಘ್ರ ಆರೋಪಿಯ ಬಂಧನ ಮಾಡಲಾಗುವುದು.

– ಮನೋಜ್ ಕುಮಾರ್ ನಾಯಕ್, ಪೊಲೀಸ್ ಉಪ ಆಯುಕ್ತ, ಪಣಂಬೂರು ಉಪ ವಿಭಾಗ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago