ಮೂಡುಬಿದಿರೆ: ಕಲ್ಲಮುಂಡ್ಕೂರು ಸರಕಾರಿ ಶಾಲೆಯಲ್ಲಿ ನಡೆದಿದ್ದ ಪೋಕ್ಸೊ ಪ್ರಕರಣದಲ್ಲಿ ಇನ್ನೂ ಆರೋಪಿಯ ಬಂಧನವಾಗದಿರುವ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫೆ.28ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಅಧ್ಯಾಪಕ ಗುರುವ ಮೊಗೇರಾ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳನೀಡಿರುವ ಬಗ್ಗೆ ಮಾ.13ರಂದು ಶಾಲೆಯ ಮುಖ್ಯೋಪಾಧ್ಯಾಯರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಮಾ.14ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣವೂ ದಾಖಲಾಗಿತ್ತು.
ಈ ನಡುವೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಮಹಿಳಾ ಠಾಣೆಯ ಪೊಲೀಸರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಅಧ್ಯಾಪಕ ಗುರುವ ಮೊಗೇರ ಲೈಂಗಿಕ ಕಿರುಕುಳ ನೀಡಿರುವುದನ್ನು ವಿದ್ಯಾರ್ಥಿನಿಯರು ಬರವಣಿಗೆಯಲ್ಲಿ ನೀಡಿದ್ದರು ಎಂದು ತಿಳಿದು ಬಂದಿದೆ.
ಪೊಲೀಸ್ ಇಲಾಖೆಯ ನಿರ್ಲಕ್ಷ್ಯದ ಪರಿಣಾಮವಾಗಿ ಆರೋಪಿಯ ಬಂಧನವಾಗುತ್ತಿಲ್ಲ. ಈ ಪ್ತಕರಣದಲ್ಲಿ ಸ್ಥಳೀಯರೂ ಮುಂದೆ ಹೋಗಲು ಹೆದರುತ್ತಿದ್ದಾರೆ. ಆರೋಪಿಯ ಸ್ವಜಾತಿಯವರು ಆತನ ಜೊತೆ ನಿಂತಿದ್ದಾರೆ ಎಂಬ ಮಾತುಗಳು ಇವೆ. ದೇವರ ಸಮಾನರಾದ ಮಕ್ಕಳ ಮೇಲೆ ಘೋರ ಕೃತ್ಯ ಎಸಗಿರುವ ಆರೋಪಿಗೆ ಯಾವುದೇ ಸಮುದಾಯ, ಸಂಘಟನೆಗಳು ರಕ್ಷಣೆಗೆ ಮುಂದಾಗಬಾರದು ಎಂದು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದನಂಜಯ ಅವರು ಹೇಳಿದ್ದಾರೆ.
ಮಾ.14ರಂದು ಪ್ರಕರಣ ದಾಖಲಾಗಿದ್ದ ವೇಳೆ ಆರೋಪಿ ಊರಿನಲ್ಲಿ ಆರಾಮವಾಗಿ ಸುತ್ತಾಡಿಕೊಂಡಿದ್ದ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬಳಿಕ ಪೊಲೀಸ್ ಇಲಾಖೆ ಮತ್ತು ಸಂಬಂಧ ಪಟ್ಟ ಇಲಾಖೆಗಳು ಕಾರ್ಯ ಪ್ರವೃತ್ತರಾದವು. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಆತನನ್ನು ಬಂಧಿಸಲು ಮುಂದಾಗದ ಪೊಲೀಸ್ ಇಲಾಖೆ ಈಗ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದು ವಿಪರ್ಯಾಸ ಎಂದು ಕಲ್ಲಮುಂಡ್ಕೂರು ಗ್ರಾಮಸ್ಥರು ಹೇಳಿದ್ದಾರೆ.
“ಆರೋಪಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿರುವುದು ವಿದ್ಯಾರ್ಥಿನಿಯರ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ. ಈತ ಈ ಹಿಂದೆಯೂ ಇಂತಹ ಕೃತ್ಯ ಎಸಗಿರುವುದು ಶಾಲೆಯ ಹಳೆ ವಿದ್ಯಾರ್ಥಿನಿಯರು ಇತ್ತೀಚೆಗೆ ನೀಡುತ್ತಿರುವ ಹೇಳಿಕೆ ಗಳಿಂದ ತಿಳಿಯುತ್ತಿದೆ. ಈತ ಅಂತರಾಷ್ಟ್ರೀಯ ಮಟ್ಟದ ಆರೋಪಿ ಏನೂ ಅಲ್ಲ. ಹೀಗಿರುವಾಗ ಆತನನ್ನು ಪೊಲೀಸ್ ಇಲಾಖೆ ಹಲವು ದಿನಗಳಿಂದ ಶೋಧ ನಡೆಸುತ್ತಿದ್ದರೂ ಬಂಧನ ಸಾಧ್ಯವಾಗದಿರುವುದು ಪೊಲೀಸರ ನಿರ್ಲಕ್ಷ್ಯವನ್ನು ತೋರಿಸುತ್ತಿದೆ”.
– ದಯಾನಂದ, ಹಳೆವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ
“ಸಧ್ಯ ಪೊಲೀಸರ ತಂಡಗಳು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿವೆ. ಶೀಘ್ರ ಆರೋಪಿಯ ಬಂಧನ ಮಾಡಲಾಗುವುದು.
– ಮನೋಜ್ ಕುಮಾರ್ ನಾಯಕ್, ಪೊಲೀಸ್ ಉಪ ಆಯುಕ್ತ, ಪಣಂಬೂರು ಉಪ ವಿಭಾಗ
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…