ಮೂಡುಬಿದ್ರಿ : ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ವೇಳೆಗೆ ಸಂಭವಿಸಿದೆ.
ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ (35) ಘಟನೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ.
ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದಿರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ವಿವಾದಲ್ಲಿ ಹೋಗುತ್ತಿದ್ದರು.
ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ಏಕಾಏಕಿಯಾಗಿ ಆಕ್ವಿವಾಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ದೂರಕ್ಕೆ ತಳ್ಳಲ್ಪಟ್ಟ ಸವಾರೆ,ಶಿಕ್ಷಕಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದರು.
ತಲೆಭಾಗಕ್ಕೆ ತೀವ್ರ ಗಾಯಗೊಂಡಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ.
ಮೃತ ಶಿಕ್ಷಕಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…