ಮೂಡುಬಿದಿರೆ : ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಸಿಡಿಲಾಘಾತಕ್ಕೆ ಒಳಗಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ನಡೆದಿದೆ.
ಅರ್ಬಿ ಪರಿಸರದಲ್ಲಿ ಶೆಡ್ ಒಂದರಲ್ಲಿದ್ದ ಸ್ಥಳೀಯ ಕಾರ್ಮಿಕರಾದ ಯಶವಂತ್(25), ಮಣಿಪ್ರಸಾದ್(25) ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದವರು. ಇನ್ನು ಇದೇ ಪರಿಸರದಲ್ಲಿದ್ದ ಮೂವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಣೇಶ್, ಸಂದೀಪ್ ಮತ್ತು ಪ್ರವೀಣ್ ಹೀಗೆ ಮೂವರು ಸಿಡಿಲು ಆಘಾತಕ್ಕೆ ಸಿಲುಕಿದ್ದು ಕೂಡಲೇ ಅವರನ್ನು ಆಲಂಗಾರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೂಡುಬಿದಿರೆ ಸಹಿತ ಗ್ರಾಮಾಂತರ ಪರಿಸರದಲ್ಲಿ ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಯಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…