Featured

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು – vishwanews24

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು

ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ  ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ.

ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಹಾಗೂ ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ ಹೊರತಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.

ಭಾನುವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಪ್ರಶಾಂತ್ ಅವರ ಪುತ್ರಿಯ ಬಾಯಿಯನ್ನು ಒತ್ತಿ ಹಿಡಿದು, ಅರಿವಳಿಕೆ ಸ್ಟೇ ಮಾಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಸುಮಾರು 2 ತಾಸುಗಳ ಬಳಿಕ ನೆರೆಮನೆಯ ಸಂಬಂಧಿಕ ಮಹಿಳೆ ಬಂದಿದ್ದು, ಆಗ ಎಚ್ಚರಗೊಂಡಿದ್ದ ಪ್ರಶಾಂತ್ ಅವರ ಪುತ್ರಿಯ ಮಹಿಳೆಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನ ವಿಭಾಗದವರೂ ಭೇಟಿ ನೀಡಿದ್ದಾರೆ. ಮನೆಯವರ ಓಡಾಟ ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago