ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ.
ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಹಾಗೂ ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ ಹೊರತಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.
ಭಾನುವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಪ್ರಶಾಂತ್ ಅವರ ಪುತ್ರಿಯ ಬಾಯಿಯನ್ನು ಒತ್ತಿ ಹಿಡಿದು, ಅರಿವಳಿಕೆ ಸ್ಟೇ ಮಾಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಸುಮಾರು 2 ತಾಸುಗಳ ಬಳಿಕ ನೆರೆಮನೆಯ ಸಂಬಂಧಿಕ ಮಹಿಳೆ ಬಂದಿದ್ದು, ಆಗ ಎಚ್ಚರಗೊಂಡಿದ್ದ ಪ್ರಶಾಂತ್ ಅವರ ಪುತ್ರಿಯ ಮಹಿಳೆಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನ ವಿಭಾಗದವರೂ ಭೇಟಿ ನೀಡಿದ್ದಾರೆ. ಮನೆಯವರ ಓಡಾಟ ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…