ಮೂಡುಬಿದಿರೆ: ಮಂಗಳೂರು ಹೊರವಲಯದ ಮೂಡಬಿದ್ರೆಯ ಕಡಲಕರೆಯ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಇಂದು 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಕಂಬಳದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಬಳ ಸಂಘಟಕ ಮತ್ತು ಶಾಸಕ ಉಮಾನಾಥ ಕೋಟ್ಯಾನ್ ಅವರು ಮುಂದಾಳತ್ವದಲ್ಲಿ ನಡೆಯುವ ಕಂಬಳ ಕೂಟವನ್ನು ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆಯಲ್ಲಿ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರ ವೇದಮೂರ್ತಿ ಈಶ್ವರ ಭಟ್, ಅತಿಥಿಗಳು, ಮತ್ತು ಧರ್ಮ ಗುರುಗಳ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು.
ದೀಪ ಬೆಳಗಿಸಿ, ಕೋಟಿ ಚೆನ್ನಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಲಾಯಿತು. ಬಳಿಕ ವೀರರಾಣಿ ಅಬ್ಬಕ್ಕ ಮೂರ್ತಿಗೆ ಹೂವಿನ ಮಾಲೆ ಹಾಕಲಾಯಿತು.
ದೈವದ ಹಿರಿಯ ಪೂಜಾರಿ,ಕಂಬಳದ ಕೋಣಗಳ ಯಜಮಾನರಾದ ಅಣ್ಣು ಶೆಟ್ಟಿ ಲಾಡಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಹಲವಾರು ಮಂದಿ ಅತಿಥಿ – ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂಬಳಕ್ಕೆ ಶುಭ ಹಾರೈಸಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…