ಮೂಡುಬಿದ್ರೆ,: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ.
ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ ಶಿಕ್ಷಕ ಗುರುವ ಮೊಗೇರಾ ಅವರಿಂದ ತೊಂದರೆಗಳಾಗುತ್ತಿರುವ ಕುರಿತು ಹೇಳಿಕೊಂಡಿದ್ದರು. ಪಠ್ಯ ಸಂಬಂಧಿತ ವಿಷಯಕ್ಕೆ ಅಥವಾ ರಜಾ ಅರ್ಜಿ ಹಿಡಿದುಕೊಂಡು ಅವರ ಬಳಿಗೆ ಹೋದಾಗ, ಇಬ್ಬರು ವಿದ್ಯಾರ್ಥಿನಿಯರಿದ್ದರೆ ಒಬ್ಬರನ್ನು ಬೈದು ಹೊರಗೆ ಕಳುಹಿಸಿ ಒಬ್ಬಳನ್ನೇ ಕೊಠಡಿಯಲ್ಲಿ ಇರುವಂತೆ ಮಾಡಿ, ಅಸಭ್ಯವಾಗಿ ವರ್ತಿಸುವುದು, ಬ್ಯಾಡ್ ಟಚ್ ಮಾಡುವುದು ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಅಧ್ಯಾಪಕ ಗುರುವ ಮೊಗೇರಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಲೆಯ ಮುಖ್ಯ ಶಿಕ್ಷಕರು ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…