ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯವಾಗಿದ್ದು, ಜಿಲ್ಲೆಯ ಸೌಹಾರ್ದ ವಾತಾವರಣ ಕೆಡಿಸುವ ಹುನ್ನಾರ ದುಷ್ಕರ್ಮಿಗಳಿಂದ ನಡೆದಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…