ಮೂಡುಬೆಳ್ಳೆ: ಸನ್ ಶೈನ್ ಕೆಟರಿಂಗ್ ಮಾಲಕ ಸಂದೀಪ್ ಶೆಟ್ಟಿ(41) ಇಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೂಡುಬೆಳ್ಳೆಯಲ್ಲಿ ಸುಮಾರು ಹದಿನೈದು ವರ್ಷಗಳಿಂದ ಶ್ಯಾಮಿಯಾನ ಮತ್ತು ಸನ್ ಶೈನ್ ಕೆಟರಿಂಗ್ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದರು.
ಅವಿವಾಹಿತರಾದ ಇವರು ತಾಯಿ, ಇಬ್ಬರ ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎಡ್ಮೇರ್ ನಿಸರ್ಗ ಯುವಕ ಮಂಡಲದ ಗೌರವಾಧ್ಯಕ್ಷರಾಗಿ, ಮೂಡುಬೆಳ್ಳೆ ಲಯನ್ಸ್ ಕ್ಲಬ್‌ನ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳುವಾಗಿ ಗುರುತಿಸಿಕೊಂಡಿದ್ದ ಅವರು ಎರು ಶ್ರೀ ಧೂಮಾವತಿ ದೈವಸ್ಥಾನದ ಸ್ಥಳ ವಂದಿಗರಾಗಿದ್ದು, ಎಡ್ಮೇರ್ ಜವಣೆರ್ ತಂಡವನ್ನು ಮುನ್ನಡೆಸಿ ಸಮಾಜ ಸೇವೆಯಲ್ಲಿ ಗುರುತಿಸಿ ಕೊಂಡಿದ್ದರು. ಮೃತರ ಅಂತ್ಯಕ್ರಿಯೆಯು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎರುಗುತ್ತು ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…