Featured

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಿಂದ ಎ.ಪಿ.ಎಂ.ಸಿ, ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು, ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 22 ರಂದು ಹೆಜಮಾಡಿ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡ ‘ ಜನಧ್ವನಿ’ ಪಾದಯಾತ್ರೆ ಮೂರನೇ ದಿನಕ್ಕೆ ತಲುಪಿದ್ದು ಉದ್ಯಾವರ ಬಲಾಯಿ ಪಾದೆಯಿಂದ ಬ್ರಹ್ಮಾವರಕ್ಕೆ ಬುಧವಾರ ಆರಂಭಗೊಂಡಿದೆ.

ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24

ಉದ್ಯಾವರ ಬಲಾಯಿಪಾದೆಯಿಂದ ಆರಂಭಗೊಂಡ ಪಾದಯಾತ್ರೆ, ಕಿನ್ನಿಮೂಲ್ಕಿ ಮೂಲಕ, ನಿಟ್ಟೂರು, ಅಂಬಾಗಿಲು ಮೂಲಕ ಸಂತೆಕಟ್ಟೆ ತಲುಪಿ ಅಲ್ಲಿಂದ ಉಪ್ಪೂರು, ಹೇರೂರು, ಮಾರ್ಗವಾಗಿ ಸಂಜೆ ಬ್ರಹ್ಮಾವರ ತಲುಪಲಿದ್ದು ಸಾರ್ವಜನಿಕ ಸಭೆ ನಡೆಯಲಿದೆ.

ಜೆಡಿಎಸ್‌‌ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24

ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಯತೀಶ್ ಕರ್ಕೇರಾ, ವೆರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ವಿಶ್ವಾಸ್ ಅಮೀನ್, ಹರೀಶ್ ಕಿಣಿ, ರೋಶನಿ ಒಲಿವರ್, ನರಸಿಂಹ ಮೂರ್ತಿ, ಪ್ರಶಾಂತ್ ಪೂಜಾರಿ, ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago