ನವದೆಹಲಿ: ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು.
ಫಲಿತಾಂಶದ ಬಳಿಕ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಕಾರ್ಯಕರ್ತರು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಈ ಪ್ರೀತಿ, ಈ ಆಶೀರ್ವಾದಕ್ಕಾಗಿ ನಾನು ದೇಶದ ಜನರಿಗೆ ಋಣಿ. ಇಂದು ಮಂಗಳಕರ ದಿನ, ಈ ಪಾವನ ದಿನದಂದು ಮೂರನೇ ಬಾರಿ ಸರ್ಕಾರ ರಚನೆಗೆ ತಯಾರಿದೆ. ನಾವೆಲ್ಲರೂ ಜನರಿಗೆ ಅಭಾರಿಯಾಗಿದ್ದೇವೆ. ದೇಶದ ಜನರು ಬಿಜೆಪಿ, ಎನ್‌ಡಿಎ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವಿಜಯ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಜಯ. ಇದು ವಿಕಸಿತ ಭಾರತದ ಜಯ. ಇದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್‌ಗೆ ಸಿಕ್ಕ ಜಯ. 140 ಕೋಟಿ ಜನರ ಗೆಲುವಾಗಿದೆ ಎಂದು ನಮಿಸಿದರು.
ನಾನು ಚುನಾವಣಾ ಆಯೋಗಕ್ಕೂ ಅಭಿನಂಧನೆ ಸಲ್ಲಿಸುತ್ತೇನೆ. ವಿಶ್ವದ ದೊಡ್ಡ ಚುನಾವಣೆಯನ್ನು ಅಚ್ಚುಕಟ್ಟಾಗಿ ಮಾಡಿದೆ. ನೂರು ಕೋಟಿ ಮತದಾರರು, 11 ಕೋಟಿ ಬೂತ್, 55 ವೋಟಿಂಗ್ ಮಷಿನ್, ತೀವ್ರ ಬಿಸಿಲಿನ ನಡುವೆ ಕರ್ತವ್ಯ ನಿಭಾಯಿಸಿದ್ದಾರೆ. ಭದ್ರತಾ ಪಡೆಗಳು ನಿಷ್ಠೆಯಿಂದ ಕೆಲಸ ಮಾಡಿವೆ. ಚುನಾವಣೆಯ ಪೂರ್ಣ ವ್ಯವಸ್ಥೆ, ಎಲ್ಲ ಭಾರತೀಯರಿಗೆ ಹೆಮ್ಮೆ ಪಡುವ ಸಂಗತಿ. ಇದಕ್ಕೆ ವಿಶ್ವದಲ್ಲಿ ಮತ್ತೇಲ್ಲಿ ಉದಾಹರಣೆ ಇಲ್ಲ ಎಂದು ಸ್ಮರಿಸಿದರು.
ಜಮ್ಮು ಕಾಶ್ಮೀರದ ಮತದಾರರು ದಾಖಲೆಯ ಮತದಾನದ ಮೂಲಕ ಉತ್ಸಾಹ ತೋರಿದ್ದಾರೆ. ಈ ವಿಜಯದ ದಿನದಂದು ದೇಶದ ಜನರಿಗೆ, ಎಲ್ಲ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ. 1962 ನಂತರ ಯಾವುದೇ ಪಕ್ಷ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರಲಿಲ್ಲ. ಮೊದಲ ಬಾರಿಗೆ ಎರಡು ಅವಧಿಯ ಬಳಿಕ ಮೂರನೇ ಬಾರಿಗೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎಗೆ ಭವ್ಯ ವಿಜಯ ಸಿಕ್ಕಿದೆ. ಅರುಣಾಚಲ, ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂನಲ್ಲಿ ಕಾಂಗ್ರೆಸ್ ನಾಶವಾಗಿದೆ. ಅವರಿಗೆ ಠೇವಣಿ ಪಡೆಯುವುದು ಕಷ್ಟವಾಗಿದೆ. ಬಿಜೆಪಿ ಒಡಿಶಾದಲ್ಲಿ ಸರ್ಕಾರ ಮಾಡುತ್ತಿದೆ. ಜಗನ್ನಾಥನ ಕೃಪೆಯಿಂದ ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಕೇರಳದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ್ದೇವೆ. ಕೇರಳದಲ್ಲಿ ಸೇವೆ ಜೊತೆಗೆ ನಮ್ಮ ಕಾರ್ಯಕರ್ತರು ಸಂಘರ್ಷ ಮಾಡಿದ್ದಾರೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…