Featured

ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ , ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ : ದೇಶದ ಜನತೆಗೆ ಮೋದಿ ಕೃತಜ್ಞತೆ – vishwanews24

ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ , ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ : ದೇಶದ ಜನತೆಗೆ ಮೋದಿ ಕೃತಜ್ಞತೆ

ನವದೆಹಲಿ: ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು.

ಫಲಿತಾಂಶದ ಬಳಿಕ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಕಾರ್ಯಕರ್ತರು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಈ ಪ್ರೀತಿ, ಈ ಆಶೀರ್ವಾದಕ್ಕಾಗಿ ನಾನು ದೇಶದ ಜನರಿಗೆ ಋಣಿ. ಇಂದು ಮಂಗಳಕರ ದಿನ, ಈ ಪಾವನ ದಿನದಂದು ಮೂರನೇ ಬಾರಿ ಸರ್ಕಾರ ರಚನೆಗೆ ತಯಾರಿದೆ. ನಾವೆಲ್ಲರೂ ಜನರಿಗೆ ಅಭಾರಿಯಾಗಿದ್ದೇವೆ. ದೇಶದ ಜನರು ಬಿಜೆಪಿ, ಎನ್‌ಡಿಎ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವಿಜಯ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಜಯ. ಇದು ವಿಕಸಿತ ಭಾರತದ ಜಯ. ಇದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್‌ಗೆ ಸಿಕ್ಕ ಜಯ. 140 ಕೋಟಿ ಜನರ ಗೆಲುವಾಗಿದೆ ಎಂದು ನಮಿಸಿದರು.

ನಾನು ಚುನಾವಣಾ ಆಯೋಗಕ್ಕೂ ಅಭಿನಂಧನೆ ಸಲ್ಲಿಸುತ್ತೇನೆ. ವಿಶ್ವದ ದೊಡ್ಡ ಚುನಾವಣೆಯನ್ನು ಅಚ್ಚುಕಟ್ಟಾಗಿ ಮಾಡಿದೆ. ನೂರು ಕೋಟಿ ಮತದಾರರು, 11 ಕೋಟಿ ಬೂತ್, 55 ವೋಟಿಂಗ್ ಮಷಿನ್, ತೀವ್ರ ಬಿಸಿಲಿನ ನಡುವೆ ಕರ್ತವ್ಯ ನಿಭಾಯಿಸಿದ್ದಾರೆ. ಭದ್ರತಾ ಪಡೆಗಳು ನಿಷ್ಠೆಯಿಂದ ಕೆಲಸ ಮಾಡಿವೆ. ಚುನಾವಣೆಯ ಪೂರ್ಣ ವ್ಯವಸ್ಥೆ, ಎಲ್ಲ ಭಾರತೀಯರಿಗೆ ಹೆಮ್ಮೆ ಪಡುವ ಸಂಗತಿ. ಇದಕ್ಕೆ ವಿಶ್ವದಲ್ಲಿ ಮತ್ತೇಲ್ಲಿ ಉದಾಹರಣೆ ಇಲ್ಲ ಎಂದು ಸ್ಮರಿಸಿದರು.

ಜಮ್ಮು ಕಾಶ್ಮೀರದ ಮತದಾರರು ದಾಖಲೆಯ ಮತದಾನದ ಮೂಲಕ ಉತ್ಸಾಹ ತೋರಿದ್ದಾರೆ. ಈ ವಿಜಯದ ದಿನದಂದು ದೇಶದ ಜನರಿಗೆ, ಎಲ್ಲ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ. 1962 ನಂತರ ಯಾವುದೇ ಪಕ್ಷ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರಲಿಲ್ಲ. ಮೊದಲ ಬಾರಿಗೆ ಎರಡು ಅವಧಿಯ ಬಳಿಕ ಮೂರನೇ ಬಾರಿಗೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎಗೆ ಭವ್ಯ ವಿಜಯ ಸಿಕ್ಕಿದೆ. ಅರುಣಾಚಲ, ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂನಲ್ಲಿ ಕಾಂಗ್ರೆಸ್ ನಾಶವಾಗಿದೆ. ಅವರಿಗೆ ಠೇವಣಿ ಪಡೆಯುವುದು ಕಷ್ಟವಾಗಿದೆ. ಬಿಜೆಪಿ ಒಡಿಶಾದಲ್ಲಿ ಸರ್ಕಾರ ಮಾಡುತ್ತಿದೆ. ಜಗನ್ನಾಥನ ಕೃಪೆಯಿಂದ ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಕೇರಳದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ್ದೇವೆ. ಕೇರಳದಲ್ಲಿ ಸೇವೆ ಜೊತೆಗೆ ನಮ್ಮ ಕಾರ್ಯಕರ್ತರು ಸಂಘರ್ಷ ಮಾಡಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

2 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago