Featured

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ – vishwanews24

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ

ಶ್ರೀಹರಿಕೋಟಾ: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ.

ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು.

ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು. ರಾಕೆಟ್ ಆರಂಭ ಚೆನ್ನಾಗಿಯೇ ಆಗಿತ್ತು. ಆದರೆ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿoದ ಈ ಮಿಷನ್ ಯಶಸ್ವಿಯಾಗಲಿಲ್ಲ ಎಂದು ಇಸ್ರೋ ತಿಳಿಸಿದೆ.

“ಇಂದು, ನಾವು PSLV C62 / EOS – N1 ಮಿಷನ್ ಅನ್ನು ಪ್ರಯತ್ನಿಸಿದ್ದೇವೆ. PSLV ರಾಕೆಟ್ ಎರಡು ಘನ ಮತ್ತು ಎರಡು ದ್ರವ ಹಂತಗಳನ್ನು ಹೊಂದಿರುವ ನಾಲ್ಕು ಹಂತದ ರಾಕೆಟ್‌ನ ಮೂರನೇ ಹಂತದ ಅಂತ್ಯದ ವೇಳೆಗೆ ವಾಹನದ ಕಾರ್ಯಕ್ಷಮತೆ ನಿರೀಕ್ಷೆಯಂತೆ ಇತ್ತು. ಆದರೆ ಮೂರನೇ ಹಂತದ ಅಂತ್ಯದ ವೇಳೆಗೆ ರಾಕೆಟ್‌ನಲ್ಲಿ ಸಮಸ್ಯೆ ಕಾಣಿಸಿ ತನ್ನ ಪಥದಲ್ಲಿ ಬದಲಾವಣೆ ಮಾಡಿತು. ನಾವು ಡೇಟಾವನ್ನು ವಿಶ್ಲೇಶಿಸಿ ಶೀಘ್ರವೇ ನಿಖರ ಕಾರಣವನ್ನು ಪತ್ತೆ ಮಾಡುತ್ತೇವೆ” ಎಂದು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago