ಮಂಗಳೂರು : ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮುಲ್ಕಿ ರೈಲ್ವೆ ಸ್ಟೇಷನ್‌ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.
ಸಂಸದ ಬ್ರಿಜೇಶ್ ಚೌಟ,ಶಾಸಕರಾದ ಉಮನಾಥ್ ಕೋಟ್ಯಾನ್,ಭರತ್ ಶೆಟ್ಟಿ ಮುಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು ಮೂರು ಕೋಟಿ ಹತ್ತು ಲಕ್ಷ ರೂಪಾಯಿಯಯ ಕೊಂಕಣ ರೈಲ್ವೆ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಕಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಹಲವಾರು ವರ್ಷಗಳ ಬೇಡಿಕೆಗೆ ಕೊಂಕಣ ರೈಲ್ವೆ ನಿಗಮ ಸ್ಪಂದಿಸಿ ಎರಡು ಭಾಗದ ಫ್ಯ್ಲಾಟ್ ಫಾರ್ಮ್ ಮೇಲ್ಛಾವಣಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಇಂದು ಕಾಮಗಾರಿಗೆ ಚಾಲನೆ ದೊರಕಿದೆ.
ಈ ಸಂಧರ್ಭದಲ್ಲಿ ಕೊಂಕಣ ರೈಲ್ವೆ ಕಾರವಾರದ ರೀಜನಲ್ ರೈಲ್ವೆ ಮೆನೇಜರ್ ಆಶಾ ಶೆಟ್ಟಿ,ಚೀಫ್ ಇಂಜಿನಿಯರ್ ಕಾರವಾರ ವಿಜಯ ಕುಮಾರ್,ಸೀನಿಯರ್ ರೀಜಿನಲ್ ಟ್ರಾಫಿಕ್ ಮೆನೆಜರ್ ದಿಲಿಪ್ ಭಟ್,ಉಡುಪಿ ವಿಭಾಗದ ಸೀನಿಯರ್ ಇಂಜಿನಿಯರ್ ಗೋಪಾಲಕೃಷ್ಣ,ಪ್ರಮುಖ ಅಧಿಕಾರಿಗಳಾದ ಸುದರ್ಶನ್ ರೆಡ್ಡಿ,ಮೀನಾ,ಪಬ್ಲಿಕ್ ರಿಲೇಶನ್ಸ್ ಮಂಗಳೂರು ವಿಭಾಗದ ಮೇನೆಜರ್ ಸುಧಾ ಕೃಷ್ಣ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…