ದಕ್ಷಿಣ ಕನ್ನಡ

ಮೂರು ಜನರಿಂದ ನಾಲ್ಕನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಬಂಟ್ವಾಳದಲ್ಲಿ ನಡೆಯಿತು ಕಣ್ಣಿರು ತರಿಸುವ ಘಟನೆ

ಸಂತ್ರಸ್ತೆ  ದೂರಿನಲ್ಲಿ ಆಘಾತಕಾರಿ ಆರೋಪಗಳು

ಬಂಟ್ವಾಳ, : ನನ್ನೊಂದಿಗಿದ್ದ ಇತರ ಮಕ್ಕಳನ್ನು ಬಿಟ್ಟು ನನ್ನನ್ನು ಮಾತ್ರ ಮನೆಯ ಮಾಳಿಗೆಗೆ ಹಾಗೂ ಹೊಸ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಧರಿಸಿದ್ದ ವಸ್ತ್ರವನ್ನು ಬಿಚ್ಚಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬುಧವಾರ ಬೆಳಕಿಗೆ ಬಂದ ಗೂಡಿನಬಳಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

ಈಕೆ ತಾಲೂಕಿನ ಖಾಸಗಿ ಶಾಲೆಯೊಂದರ ನಾಲ್ಕನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಆರೋಪ ೧: 
ಗೂಡಿನಬಳಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ವೇಳೆ ನೆರೆಕರೆಯ ಮಕ್ಕಳೊಂದಿಗೆ ಸೇರಿ ಅಲ್ಲೇ ಸಮೀಪದ ಅಬೂಬಕರ್ ಎಂಬವರ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿರುವ ಅಂಬಾರಿ ರಝಾಕ್ ಎಂಬಾತನ ಮನೆಗೆ ಹೋಗಿದ್ದೆ. ಈ ವೇಳೆ ರಝಾಕ್ ಜೊತೆಗಿದ್ದ ಇತರ ಮಕ್ಕಳನ್ನು ಬಿಟ್ಟು ನನ್ನನ್ನು ಮಾತ್ರ ಮನೆಯ ಮಾಳಿಗೆಗೆ ಕರೆದುಕೊಂಡು ಹೋಗಿ ಧರಿಸಿದ್ದ ವಸ್ತ್ರವನ್ನು ಬಿಚ್ಚಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂತ್ರಸ್ತೆ ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪ 2: 
ಇದಲ್ಲದೆ ಅಲ್ಲೇ ಪಕ್ಕದ ನಿವಾಸಿ ಗುಜರಿ ವ್ಯಾಪಾರಿ ಶೇಕಬ್ಬ ಎಂಬಾತ ಗುಜರಿ ತೆಗೆಯಲಿಕ್ಕಿದೆ ಎಂದು ಹೇಳಿ ಹೊಸ ಕಟ್ಟಡವೊಂದಕ್ಕೆ ಕರೆದುಕೊಂಡು ಹೋಗಿ ಆತನೂ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಆರೋಪ 3: 
ಹಸನಬ್ಬ ಎಂಬವರ ಪುತ್ರ ಹೊಟೇಲ್ ಕಾರ್ಮಿಕ ನವಾಝ್ ಎಂಬಾತನು ನನ್ನನ್ನು ಹತ್ತಿರ ಕರೆದು ಆತನ ಜನನಾಂಗವನ್ನು ನನಗೆ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಂತ್ರಸ್ತೆ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಯಾರಲ್ಲಾದರೂ ತಿಳಿಸಿದರೆ ಕೈ ಕಾಲು ಮುರಿಯುತ್ತೇವೆ

ದುಷ್ಕರ್ಮಿಗಳು ಅತ್ಯಾಚಾರ ಎಸಗಿದ ಬಳಿಕ ಯಾರಲ್ಲೂ ವಿಷಯ ತಿಳಿಸಿದಂತೆ ಬಾಲಕಿಯನ್ನು ಬೆದರಿಸಿದರೆನ್ನಲಾಗಿದೆ. ಈ ವಿಷಯವನ್ನು ಯಾರಲ್ಲಾದರೂ ತಿಳಿಸಿದರೆ ಹೊಡೆದು ಕೈ ಕಾಲು ಮುರಿದು ಹಾಕುತ್ತೇವೆ ಎಂಬಿತ್ಯಾದಿಯಾಗಿ ಆರೋಪಿಗಳಾದ ರಝಾಕ್ ಹಾಗೂ ಶೇಕಬ್ಬ ಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ಬಾಲಕಿ ಪೊಲೀಸರೊಂದಿಗೆ ಹೇಳಿಕೊಂಡಿದ್ದಾಳೆ.

ಬಾಲಕಿಯ ವರ್ತನೆಯಲ್ಲಿ ಬದಲಾವಣೆ: 
ಇತ್ತೀಚೆಗೆ ಬಾಲಕಿಯ ವರ್ತನೆ ಹಾಗೂ ದೇಹದಲ್ಲಿ ಉಂಟಾದ ಕೆಲವೊಂದು ಬೆಳವಣಿಗೆಗಳನ್ನು ಗಮನಿಸಿ ಮನೆ ಮಂದಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೃತ್ಯಗಳು ಬೆಳಕಿಗೆ ಬಂದಿವೆ.

ಸೂಕ್ತ ಕ್ರಮ: ಬಂಟ್ವಾಳ ಎಸ್ಸೈ 
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದಿರುವ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯ ಬಳಿಕ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್ ತಿಳಿಸಿದ್ದಾರೆ.

ಮೂವರು ವಶಕ್ಕೆ:

ಬಾಲಕಿಯ ಹೇಳಿಕೆ ಪಡೆದುಕೊಂಡು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು ಮೂವರೂ ಆರೋಪಿಗಳನ್ನು ಬುಧವಾರ ರಾತ್ರಿ ವಶಕ್ಕೆ ಪಡೆಡಿದ್ದಾರೆ.
ಗೂಡಿನಬಳಿಯ ನಿವಾಸಿ ಗುಜರಿ ವ್ಯಾಪಾರಿ ಶೇಕಬ್ಬ(65), ಬೇಕರಿ ಸಾಮಗ್ರಿಗಳನ್ನು ಲೈನ್ ಸೇಲ್ ಮಾಡುವ ಅಂಬಾರಿ ಯಾನೆ ರಝಾಕ್ (35) ಹಾಗೂ ಹೊಟೇಲ್‌ ಕಾರ್ಮಿಕ ನವಾಝ್ (22) ಪೊಲೀಸ್ ವಶದಲ್ಲಿರುವ ದೌರ್ಜನ್ಯ ಪ್ರಕರಣದ ದ ಆರೋಪಿಗಳು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago