ಶಿವಮೊಗ್ಗ: ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು.
ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೆ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. ಕರ್ನಾಟಕದಲ್ಲಿ ಕೋಚಿಂಗ್ ಡಿಪೋ ಸಿದ್ಧವಾಗುತ್ತಿದ್ದು, ಶಿವಮೊಗ್ಗದಲ್ಲೇ ಆಗುತ್ತಿರುವುದು ಗಮನಾರ್ಹ ಎಂದು ಹೇಳಿದರು. ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.
ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…