ಮೂರು ತಿಂಗಳ ಅವಧಿಗೆ ಉಚಿತ ಪಡಿತರ ಘೋಷಿಸಿದ ಮಧ್ಯಪ್ರದೇಶ ಸರ್ಕಾರ -Vishwanews24
ಮೂರು ತಿಂಗಳ ಅವಧಿಗೆ ಉಚಿತ ಪಡಿತರ ಘೋಷಿಸಿದ ಮಧ್ಯಪ್ರದೇಶ ಸರ್ಕಾರ -Vishwanews24
ಭೋಪಾಲ್ : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ಕೊರೊನಾ ತಡೆಗೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ 3 ತಿಂಗಳ ಅವಧಿಗೆ ಉಚಿತ ಪಡಿತರ ನೀಡುವುದಾಗಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುವ ಜೊತೆಗೆ ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕೋವಿಡ್ ಲಸಿಕೆ ಮತ್ತು ಔಷಧ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜನರು ಎಚ್ಚರ ವಹಿಸಿದ್ದರೆ ಇಂತಹ ಸಂಕಷ್ಟ, ಸಮಸ್ಯೆ ಎದುರಾಗುತ್ತಿರಲಿಲ್ಲ : ಡಾ.ಕೆ.ಸುಧಾಕರ್ -Vishwanews24
