ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆ. 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ : ಎಚ್.ಡಿ. ಕುಮಾರಸ್ವಾಮಿ – Vishwanews24
ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆಗಸ್ಟ್ 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ. ಈ ಜಿಲ್ಲೆಯಲ್ಲಿ ಪುನಃ ಶಾಂತಿ ಸ್ಥಾಪನೆ ಆಗಬೇಕು’ ಎಂದರು.
‘ಮುಖ್ಯಮಂತ್ರಿ ಜಿಲ್ಲೆಗೆ ಏನು ಸಾಧನೆ ಮಾಡಿದರು? ಆತಂಕದಲ್ಲಿದ್ದ ಜನರಲ್ಲಿ ಮುಖ್ಯಮಂತ್ರಿ ವಿಶ್ವಾಸ ಮೂಡಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಯಾರನ್ನು ಮೆಚ್ಚಿಸಲು ಇವರು ಸಿಎಂ ಆಗಿದ್ದಾರೆ’ ಎಂದು ಪ್ರಶ್ನಿಸಿದರು.
ಸುರತ್ಕಲ್‌ನಲ್ಲಿ ಗುರುವಾರ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಪಾಝಿಲ್ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿ ಆಧಾರದಲ್ಲಿ ಹಂತಕರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಕೋಟ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಎಸೆಸೆಲ್ಸಿ ವಿದ್ಯಾರ್ಥಿನಿ – Vishwanews24
