Featured

ಮೂಲ್ಕಿ:ಹೆದ್ದಾರಿ ಬದಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು   -Vishwanews24

ಮೂಲ್ಕಿ: ಹೆದ್ದಾರಿ ಬದಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

ಮೂಲ್ಕಿ : ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಮಧ್ಯರಾತ್ರಿ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ.

ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು ನಿಂತಿತ್ತು. ಹೀಗಾಗಿ ಲಾರಿಯನ್ನು ದುರಸ್ತಿ ಮಾಡಲೆಂದು ಮೂವರು ಲಾರಿಯಿಂದ ಇಳಿದು ಟಯರ್ ಬದಲಿಸುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಕಾರು ಮೂವರಿಗೂ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವನಿಗೆ ಗಾಯಗಳಾಗಿದೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿ ಹೊಡೆದ ಕಾರು ಸ್ಥಳದಲ್ಲಿ ನಿಲ್ಲದೇ ಪರಾರಿಯಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

12 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

13 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago