ಮೂಲ್ಕಿ : ಹೆದ್ದಾರಿ ಬದಿಯಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದವರಿಗೆ ಕಾರು ಢಿಕಿ ಹೊಡೆದು ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಮಧ್ಯರಾತ್ರಿ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಪಂಪಿನ ಬಳಿ ನಡೆದಿದೆ.
ಮಧ್ಯ ಪ್ರದೇಶದ ಬಬುಲು (23) ಅಚಲ್ ಸಿಂಗ್ (30) ಮೃತ ದುರ್ದೈವಿಗಳು. ಕೇರಳ ನಿವಾಸಿ ಅನಿಶ್ (42) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದ ಲಾರಿಯ ಚಕ್ರ ಪಂಕ್ಚರ್ ಆಗಿ ಪಡುಪಣಂಬೂರು ಹೆದ್ದಾರಿ ಬಳಿ ಕೆಟ್ಟು ನಿಂತಿತ್ತು. ಹೀಗಾಗಿ ಲಾರಿಯನ್ನು ದುರಸ್ತಿ ಮಾಡಲೆಂದು ಮೂವರು ಲಾರಿಯಿಂದ ಇಳಿದು ಟಯರ್ ಬದಲಿಸುತ್ತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಬಂದ ಕಾರು ಮೂವರಿಗೂ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವನಿಗೆ ಗಾಯಗಳಾಗಿದೆ. ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿ ಹೊಡೆದ ಕಾರು ಸ್ಥಳದಲ್ಲಿ ನಿಲ್ಲದೇ ಪರಾರಿಯಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…