ಮೂಲ್ಕಿ: ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು. ಇವರ ಸಾವಿನ ಸುದ್ದಿ ತಿಳಿದು ಇಡೀ ಕಾಲೇಜು ಇಂದು ಮೌನವಾಗಿದೆ. ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…