ಮೂಲ್ಕಿ,: ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.
ಇವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.ಸಂತೋಷ್ ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಗೊಳಗಾಗಿ ಕಿನ್ನಿಗೋಳಿ ಪರಿಸರದ ಶಾಲೆಯ ಕೆಲ ಮಕ್ಕಳು ಗಂಭೀರಾವಸ್ಥೆಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.
ಮಕ್ಕಳ ರಕ್ಷಣೆಯ ಸಂದರ್ಭ ಕಣಜದ ಹುಳು ಸಂತೋಷ್ ಅವರಿಗೂ ಕಡಿದಿದ್ದು, ಆದರೆ, ಅವರು ಯಾವುದೇ ಚಿಕಿತ್ಸೆ ಪಡೆಯದೆ ಮನೆ ಕಡೆ ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆರು ಮಕ್ಕಳ ರಕ್ಷಣೆ ಮಾಡಿದ ಸಂತೋಷ್ ಅವರ ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಮೃತರು ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…