Featured

ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು – vishwanews24

ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು

ಮಂಗಳೂರು : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ.

ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಬ್ಬಿಣದ ಸೈಡ್ ಗಾರ್ಡ್‌ಗೆ ಹೊಡೆದು ನಿಂತಿದೆ.

ಅಪಘಾತದ ತೀವ್ರತೆಗೆ ವನಜಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಯಲ್ಲಿದ್ದ ಜೆಸಿಂತಾ ಮಚಾದೊ ಅವರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ವನಜಾ ಅವರು ಪತಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಮೂಲ್ಕಿ ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago