ಮಂಗಳೂರು : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ.
ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ.
ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಬ್ಬಿಣದ ಸೈಡ್ ಗಾರ್ಡ್‌ಗೆ ಹೊಡೆದು ನಿಂತಿದೆ.
ಅಪಘಾತದ ತೀವ್ರತೆಗೆ ವನಜಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಯಲ್ಲಿದ್ದ ಜೆಸಿಂತಾ ಮಚಾದೊ ಅವರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ವನಜಾ ಅವರು ಪತಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಮೂಲ್ಕಿ ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…