ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಹಿತೇಶ್ ಶೆಟ್ಟಿಗಾರ್ ಬಂಧಿತ ಆರೋಪಿ
ನಿನ್ನೆ ಸಂಜೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುವಿನಲ್ಲಿ ಸಂಜೆ ಈ ದುರ್ಘಟನೆ ನಡೆದಿತ್ತು. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆ ಬದಿಯಲ್ಲಿ ತೆಂಗಿನಕಾಯಿ, ಹಲಸು ವ್ಯಾಪಾರ ಮಾಡುತ್ತಿದ್ದು ಪತ್ನಿ ಲಕ್ಷೀ ಬೀಡಿ ಕಟ್ಟುತ್ತಿದ್ದು ಕಳೆದ ಒಂದು ವಾರದಿಂದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು.
ನಿನ್ನೆ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದಾಗ ಗಂಡ ಹಿತೇಶ್ ಶೆಟ್ಟಿಗಾರ್ ಬಳಿ ಮಕ್ಕಳು ಎಲ್ಲಿ ಎಂದು ವಿಚಾರಿಸಿದಾಗ, ಎಲ್ಲೂ ಅಡಗಿರಬಹುದು ಎಂದು ಹೇಳಿದ್ದಾನೆ,
ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಣೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತಕ್ಷಣ ಸ್ಥಳೀಯರು ಬಂದು ಐವರನ್ನು ಮೇಲಕ್ಕೆತ್ತಿದ್ದು, ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ-ತಾಯಿ ಬದುಕುಳಿದಿದ್ದಾರೆ.
ಇಂದು ಮೂವರು ಮಕ್ಕಳ ಮರಣೋತ್ತರ ಪರೀಕ್ಷೆ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…