ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೌಹಾರ್ದ ಸಾರುವ ದೇವಾಲಯವೆಂದೇ ಖ್ಯಾತವಾಗಿರುವ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಈ ಸಲವೂ ಹಿಂದೂಯೇತರ ವ್ಯಾಪಾರಿಗಳು ಮಳಿಗೆಗಳನ್ನು ಸ್ಥಾಪಿಸುವುದಕ್ಕೆ ಅವಕಾಶ ನಿರಾಕರಿಸಲಾಗಿದೆ.
ಮುಸ್ಲಿಂ ಸಮುದಾಯದ ಬಪ್ಪ ಬ್ಯಾರಿಯೇ ನಿರ್ಮಿಸಿದ ದೇವಸ್ಥಾನ ಎಂಬ ಐತಿಹ್ಯ ಹೊಂದಿರುವ ಈ ದೇವಸ್ಥಾನದಲ್ಲೂ ಹಿಂದೂವೇತರರ ವ್ಯಾಪಾರಕ್ಕೆ ನಿರ್ಬಂಧ ಹೇರಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಿಂದುತ್ವ ಸಂಘಟನೆಗೆ ಸೇರಿದವರೆನ್ನಲಾದ ಕೆಲವರು ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿಯೊಂದನ್ನು ಸಲ್ಲಿಸಿದ್ದರು ಎನ್ನಲಾಗಿದೆ.
ಈ ಮನವಿಯಲ್ಲಿ “ಹಿಂದೂ ಧಾರ್ಮಿಕ ದತ್ತಿ ನಿಯಮ 2002ರಂತೆ ದೇವಸ್ಥಾನದ ಆವರಣದಲ್ಲಿ ಇತರ ಮತೀಯರು ವ್ಯಾಪಾರ ಮಾಡುವಂತಿಲ್ಲ. ಇಲಾಖೆಯ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಈ ಮನವಿಯನ್ನು ಮುಂದಿಟ್ಟುಕೊಂಡು ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮತ್ತು ಮುಸಲ್ಮಾನರೇ ನಿರ್ಮಿಸಿರುವ ಬಪ್ಪನಾಡು ದೇವಸ್ಥಾನದ ಜಾತ್ರಾಮಹೊತ್ಸವದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಕೋಮು ಸಾಮರಸ್ಯಕ್ಕೆ ಧಕ್ಕೆಯಿಲ್ಲ’
‘ಬಪ್ಪಬ್ಯಾರಿಗೆ ಒಲಿದ ಶ್ರೀದುರ್ಗೇ ಎನ್ನುವ ಚರಿತ್ರೆಗೆ ಎಂದೂ ಧಕ್ಕೆ ಬಂದಿಲ್ಲ. ಪರಂಪರೆಯಂತೆ ಇಂದಿಗೂ ಬಪ್ಪಬ್ಯಾರಿಯ ಮನೆತನಕ್ಕೆ ದೇವಳದಿಂದ ಪ್ರಸಾದ ನೀಡಲಾಗುತ್ತಿದೆ. ಮುಜರಾಯಿ ಇಲಾಖೆಯ ನಿಯಮ ದೇವಳದ ಜಾಗಕ್ಕೆ ಸಂಬಂಧಿಸಿ ಮಾತ್ರ ಅನ್ವಯಿಸುತ್ತದೆ. ಖಾಸಗಿ ಜಮೀನಿನಲ್ಲಿ ನಾವು ಹಕ್ಕು ಚಲಾಯಿಸಲು ಅವಕಾಶ ಇಲ್ಲ’ ಎಂದು ದೇವಸ್ಥಾನದ ಆನುವಂಶಿಕ ಮೊಕ್ತೇರಸರಾದ ಎಂ. ದುಗ್ಗಣ್ಣ ಸಾವಂತ ಅವರು ತಿಳಿಸಿದರು.
ಕಳೆದ 800 ವರ್ಷಗಳಿಂದಲೂ ಇಲ್ಲಿ ಹೆಚ್ಚಾಗಿ ಮುಸ್ಲಿಂ ವ್ಯಾಪಾರಿಗಳು ದೇವರಿಗೆ ಪ್ರಿಯವಾದ ಮಲ್ಲಿಗೆ ಹೂವು ಮಾರಾಟದ ಮಳಿಗೆ, ಮಕ್ಕಳ ಆಟಿಕೆಗಳ ಮಳಿಗೆಗಳನ್ನು ಇಡುತ್ತಿದ್ದರು. ಅದೂ 800ವರ್ಷಗಳಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಆದರೆ ಎರಡು ವರ್ಷಗಳಿಂದ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗ್ತಿದೆ. ಸುಮಾರು 800 ವರ್ಷಗಳ ಹಿಂದೆ ಬಪ್ಪಬ್ಯಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಶ್ರೀ ದುರ್ಗಾಪರಮೇಶ್ವರಿ ದೇವಿ ಒಲಿದಿದ್ದರು. ಆ ಬಳಿಕ ದೇವಿಯ ಸೂಚನೆಯಂತೆ ಬಪ್ಪಬ್ಯಾರಿ ಮುಲ್ಕಿಯಲ್ಲಿ ದುರ್ಗಾಪರಮೇಶ್ವರಿ ಅಮ್ಮನವರಿಗೆ ದೇವಸ್ಥಾನವನ್ನು ನಿರ್ಮಿಸಿದರು ಎಂಬುದು ಮುಲ್ಕಿ ಬಪ್ಪನಾಡು ದೇವಸ್ಥಾನದ ಇತಿಹಾಸ ಹೇಳುತ್ತದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…