BREAKING NEWS – ಮೂಳೂರು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಡೈವರ್ಶನ್ನಲ್ಲಿ ಭೀಕರ ಅಪಘಾತ : ಬೈಕ್ ಸವಾರ ಗಂಭೀರ – Vishwanews24
ಮೂಳೂರು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಡೈವರ್ಶನ್ನಲ್ಲಿ ಭೀಕರ ಅಪಘಾತ : ಬೈಕ್ ಸವಾರ ಗಂಭೀರ
ಕಾಪು : ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾಪು ಕೋತಲಕಟ್ಟೆ ನಿವಾಸಿ ಫಾರೂಖ್ (65) ಗಂಭೀರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಕೊಪ್ಪಲಂಗಡಿ ಮಸೀದಿಗೆ ತೆರಳಿ, ವಾಪಸ್ಸಾಗುತ್ತಿದ್ದಾಗ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಗಾಯಾಳುವನ್ನು ಖಾಸಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.
