Featured

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ – Vishwanews24

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಕಾಪು : ರಾಷ್ಟ್ರೀಯ ಹೆದ್ದಾರಿ 66 ಮೂಳೂರು ಭಾರತ್‌ ಪೆಟ್ರೋಲಿಯಂ ಪಂಪ್‌ನಲ್ಲಿ ಫ್ಯೂಯೆಲ್‌ ಹಾಕಿಸಿಕೊಳ್ಳಲು ಬಂದ ಕಾರು ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಧಾಂದಲೆ ನಡೆಸಿ ಸಿಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.

ಕಾರು ಚಾಲಕ ತನ್ನ ಕಾರಿಗೆ ಡಿಸೇಲ್‌ ಹಾಕಿಸಲೆಂದು ಬಂದು ಎರಡು ಸಾವಿರ ರೂಪಾಯಿ ಮೊತ್ತದ ಡೀಸೆಲ್‌ ಹಾಕುವಂತೆ ಹೇಳಿದ್ದನು. ಆ ವೇಳೆ ಪಂಪ್‌ ಸಿಬಂದಿ ಅಂಕಿತ್‌ ಎಂಬಾತ ತಪ್ಪಿ ಪೆಟ್ರೋಲ್‌ ಗನ್‌ಎತ್ತಿದ್ದು ಇದರಿಂದ ಆಕ್ರೋಶಿತನಾದ ಚಾಲಕ ಪೆಟ್ರೋಲ್‌ ಮತ್ತು ಡೀಸೆಲ್‌ ಯುನಿಟ್‌ಗಳಿಗೆ ಕಾಲಿನಿಂದ ತುಳಿದು ಸೆ„ಪಿಂಗ್‌ ಮೆಷೀನ್‌ ಅನ್ನು ಕಿತ್ತುಕೊಂಡು ಒಡೆದು ಹಾಕಿ, ಧಾಂದಲೆ ನಡೆಸಿದ್ದನು.

ಘಟನೆಯನ್ನು ವಿಚಾರಿಸಲು ಬಂದ ಪಂಪ್‌ನ ಸೂಪರ್‌ವೈಸರ್‌ ಪುಷ್ಪರಾಜ್‌ ಎಂಬವರು ನಿಮ್ಮ ಹಣ ಹಿಂದೆ ಹಾಕಿದ್ದೇವೆ ಎಂದರೂ ಕೇಳದೆ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ಸೂಪರ್‌ವೈಸರ್‌ ಪುಷ್ಪರಾಜ್‌ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಅಪರಿಚಿತ ಚಾಲಕನ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

35 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago