Featured

ಮೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ಕುಸಿತ: ಟ್ರಕ್ಕ್ – ಈಚರ್ ಡಿಕ್ಕಿ!

ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿಯ ಆರೋಪ

ಕಾಪು : ಮೂಳೂರು ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಶ್ಚಿಮ ಭಾಗದ ದ್ವಿಪಥ ರಸ್ತೆ ಇದ್ದಕ್ಕಿದ್ದಂತೆ ಕುಸಿದು ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಅದೇ ಭಾಗದಲ್ಲಿ ಟ್ರಕ್ಕ್ ವೊಂದಕ್ಕೆ ಈಚರ್ ಡಿಕ್ಕಿಯಾಗಿದೆ.ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣದ ವೇಳೆ ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿ ನಡೆದಿರುವುದಕ್ಕೆ ಇದೀಗ ಸಾಕ್ಷಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮರ್ಪಕವಾದ ಸರ್ವಿಸ್ ರಸ್ತೆ ಹಾಗು ಕ್ರಾಸಿಂಗ್ ವ್ಯವಸ್ಥೆಯಿಂದ ವಂಚಿತರಾದ ಸಾರ್ವಜನಿಕರು ವಾಹನ ಸಂಚಾರಿಗಳು ಈಗಾಗಲೇ ಸಮಸ್ಯೆಯನ್ನು ಎದುರಿಸುತ್ತಿದ್ದು, ಹಲವಾರು ಅಪಘಾತಗಳು ಸಂಭವಿಸಿರುದಲ್ಲದೆ, ಅದೆಷ್ಟೋ ಮಂದಿ ಪ್ರಾಣ ಕಳಕೊಂಡಿದ್ದಾರೆ. ಈ ರಸ್ತೆಯನ್ನು ಕಳೆದ ಎರಡು ವರ್ಷದ ಹಿಂದೆಯಷ್ಟೇ ನಿರ್ಮಾಣ ಮಾಡಲಾಗಿದ್ದು, ಸ್ಥಳೀಯರ ಪ್ರಕಾರ ಈ ಭಾಗದಲ್ಲಿದ್ದ ಬಾವಿಯನ್ನು ಮುಚ್ಚಿ ರಸ್ತೆ ನಿರ್ಮಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ನೀರಿನ ಒರೆತ ಹೆಚ್ಚಾಗಿ ಮಣ್ಣು ತುಂಬಿಸಿದ ಬಾವಿ ಇದ್ದ ಜಾಗ ಈಗ 5 ಅಡಿ ಸುತ್ತಳತೆ ಹಾಗೂ ಎರಡು ಅಡಿ ಆಳಕ್ಕೆ ಕುಸಿದಿದೆ. ಸಂಜೆ ವಾಹನ ಸವಾರರು ಸಂಚರಿಸುವ ವೇಳೆ ಇದು ಗಮನಕ್ಕೆ ಬಂದಿದ್ದು, ಸಮಯ ಕಳೆದಂತೆ ಕುಸಿತ ಹೆಚ್ಚಾಗಿ ಜನ ಹಾಗೂ ವಾಹನ ಸವಾರರು ಆತಂಕಿತರಾದರು. ಹೆದ್ದಾರಿ ಕಾಮಗಾರಿ ವೇಳೆ ಬಾವಿಗೆ ಸರಿಯಾಗಿ ಕಲ್ಲು ಮಣ್ಣು ತುಂಬಿಸದೆ ಇರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟ್ರಕ್ಕ್ – ಈಚರ್ ನಡುವೆ ಅಪಘಾತ: ರಾ.ಹೆ ಕುಸಿದ ಭಾಗದಲ್ಲಿ ಉಡುಪಿಯತ್ತ ಸಾಗುತ್ತಿದ್ದ ಟ್ರಕ್ಕ್ ಹಿಂಭಾಗಕ್ಕೆ ಈಚರ್ ಡಿಕ್ಕಿಯಾಗಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಸುದ್ದಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಕುಸಿದ ಭಾಗದ ಸುತ್ತ ಬ್ಯಾರಿಕೇಡ್ ಅಳವಡಿಸಿ ವಾಹನ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago