Featured

ಮೂಳೂರು: ಸರಣಿ ಅಪಘಾತ – ಮೂರು ಕಾರುಗಳು ಜಖಂ – vishwanews24

ಮೂಳೂರು: ಸರಣಿ ಅಪಘಾತ – ಮೂರು ಕಾರುಗಳು ಜಖಂ

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಕಾರುಗಳು ಜಖಂಗೊಂಡಿವೆ.
ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಕಾರು ಹೆದ್ದಾರಿಯಲ್ಲಿ ನಿಂತಿದ್ದ ನೀರಿನಲ್ಲಿ ತೇಲಾಡಿದಂತಾಗಿ, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಆ ಕಾರು ಮುಂದಕ್ಕೆ ಚಲಿಸಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಹೆದ್ದಾರಿ ಬದಿಯ ಪೊದೆಗೆ ಹೋಗಿದ್ದು, ಮತ್ತೊಂದು ಕಾರು ರಸ್ತೆ ಬದಿಯಲ್ಲಿ ನಿಂತಿದೆ. ಈ ವೇಳೆ ಒಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಚಲಿಸಿದೆ.

ಮೂರೂ ಕಾರುಗಳಲ್ಲಿದ್ದ ಪಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾವು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಸ್ತವ್ಯಸ್ತಗೊಂಡಿದ್ದ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

59 seconds ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

8 minutes ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

2 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

2 hours ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago