ಕಾಪು:ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ಆಶ್ರಯದಲ್ಲಿ ದಶಮನೋತ್ಸವದ ಪ್ರಯುಕ್ತ 30 ಗಜಗಳ ಹೊನಲು ಬೆಳಕಿನ ಪಂದ್ಯಾಟ ಇಂದು ಸಂಜೆ (ಶನಿವಾರ) ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ.
ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ 33,333₹ ಹಾಗೂ ಶಾಶ್ವತ ಫಲಕ,ದ್ವಿತೀಯ ಬಹುಮಾನವಾಗಿ 22,222₹ ಹಾಗೂ ಶಾಶ್ವತ ಫಲಕ ಸಿಗಲಿದೆ.
ಮಾತ್ರವಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿ,ಸರಣಿ ಶ್ರೇಷ್ಠ ಪ್ರಶಸ್ತಿ, ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯಶ್ಪಾಲ್ ಸುವರ್ಣ,ಮನೋಹರ್ ಶೆಟ್ಟಿ, ಪ್ರಭಾಕರ ಪೂಜಾರಿ,ಮನೋಹರ್ ಅಡ್ಯಂತಾಯ,ನಾರಾಯಣ ಶೆಟ್ಟಿ ಗೀತಾಂಜಲಿ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಉಮೇಶ್ ಎಲ್ ಪೂಜಾರಿ ವಹಿಸಲಿದ್ದಾರೆ.
ಸಮರೋಪ ಕಾರ್ಯಕ್ರಮ ಆದಿತ್ಯವಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…