Featured

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ

ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ : ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಮಹತ್ವಾಕಾಂಕ್ಷಿ ಯೋಜನೆ

ಕಾಪು: ಸಮಾಜ ಸೇವೆಯನ್ನು ಪ್ರಮುಖ ಧೈಯವಾಗಿಟ್ಟುಕೊಂಡು ಕಳೆದ ಹಲವು ವರ್ಷಗಳಿಂದ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮಾನವೀಯ ಸೇವಾ ಕ್ಷೇತ್ರಗಳಲ್ಲಿ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ತುಳು ನಾಡಿನ ಹೆಮ್ಮೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಪಿಲಿಏಸ -2026” ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಇದರಿಂದ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಹಾಕಿಕೊಂಡಿದ್ದಾಗಿ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯ ವಿಶ್ವನಾಥ ಸನಿಲ್  ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಮಾಜದ ಪ್ರತಿಯೊಬ್ಬರ ಬದುಕಿನಲ್ಲಿ ಅಗತ್ಯದ ಸಂದರ್ಭದಲ್ಲಿ ನೆರವಾಗಬೇಕು ಎಂಬ ಮಹತ್ತರ ಆಶಯದೊಂದಿಗೆ ಟ್ರಸ್ಟ್ ತನ್ನ ಸೇವಾ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಕಲ್ಪವನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು, ಹೃದಯಾಘಾತ, ತುರ್ತು ವೈದ್ಯಕೀಯ ಪರಿಸ್ಥಿತಿಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಕಾಲಕ್ಕೆ ಅಂಬ್ಯುಲೆನ್ಸ್ ಸೌಲಭ್ಯ ದೊರೆಯದ ಕಾರಣ ಅಮೂಲ್ಯ ಜೀವಗಳು ಕಳೆದು ಹೋಗುತ್ತಿರುವುದು ನೋವಿನ ಸಂಗತಿಯಾಗಿದೆ.

ಈ ಹಿನ್ನೆಲೆ ಮೂಳೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಯಾವುದೇ ಜಾತಿ, ಧರ್ಮ ಅಥವಾ ವರ್ಗಭೇದವಿಲ್ಲದೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ನಮ್ಮ ಟ್ರಸ್ಟ್ ಕೈಗೆತ್ತಿಕೊಂಡಿದೆ.

ಈ ಕನಸಿನ ಯೋಜನೆಗೆ ಅಗತ್ಯವಿರುವ ನಿಧಿಯನ್ನು ಸಂಗ್ರಹಿಸುವ ಸಲುವಾಗಿ ತುಳುನಾಡಿನ ಹೆಮ್ಮೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಪಿಲಿಏಸ-2026” ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಕೇವಲ ಸಾಂಸ್ಕೃತಿಕ ಉತ್ಸವವಲ್ಲ. ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಾನವೀಯ ಸೇವೆಯ ಮಹಾಯಜ್ಞವಾಗಿದೆ.

2026 ಸೆಪ್ಟೆಂಬರ್ 16ರಂದು ಸಂಜೆ ಸಂಪ್ರದಾಯಬದ್ಧ ಊದು ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಮೂಳೂರು ಸಾಯಿರಾಧ ಬೀಚ್ ರೆಸಾರ್ಟ್ ಪಾರ್ಕಿಂಗ್ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.

ಸಾವಿರಾರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಿಂದ ಸಂಗ್ರಹವಾಗುವ ಸಂಪೂರ್ಣ ನಿಧಿಯನ್ನು ಅಂಬ್ಯುಲೆನ್ಸ್ ವಾಹನ ಖರೀದಿ, ವೈದ್ಯಕೀಯ ಉಪಕರಣಗಳ ಅಳವಡಿಕೆ, ವಾಹನದ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಉಚಿತ ತುರ್ತು ಸೇವೆ ಒದಗಿಸಲು ಬಳಸಲಾಗುತ್ತದೆ. ನಮ್ಮ ಉದ್ದೇಶ ಕೇವಲ ವಾಹನ ಖರೀದಿಸುವುದಲ್ಲ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ವಿಶ್ವಾಸಾರ್ಹ ಸೇವಾ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ.

ಪತ್ರಿಕಾ ಭವನದಲ್ಲಿ “ಪಿಲಿಏಸ-2026” ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಮೂಲಕ ಕಾರ್ಯಕ್ರಮದ ಉದ್ದೇಶ, ಸಮಾಜಮುಖಿ ಸೇವೆಯ ಆಶಯ ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮಹತ್ವವನ್ನು ಪರಿಚಯಿಸುತ್ತಿದ್ದೇವೆ. ಈ ಕಾರ್ಯಕ್ರಮದ ಯಶಸ್ಸು ಕೇವಲ ಟ್ರಸ್ಟ್‌ದ್ದಲ್ಲ, ಇಡೀ ಸಮಾಜದ ಯಶಸ್ಸಾಗಲಿದೆ ಎಂಬ ನಂಬಿಕೆ ನಮ್ಮದು.

ಈ ಸಮಾಜಮುಖಿ ಕಾರ್ಯದಲ್ಲಿ ಕೈಜೋಡಿಸಲು ದಾನಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳು,ಯುವಜನರು, ಮಹಿಳಾ ಸಂಘಗಳು, ಗ್ರಾಮಸ್ಥರು ಹಾಗೂ ಎಲ್ಲಾ ಸಮಾಜಬಂಧುಗಳನ್ನು ಆತ್ಮೀಯವಾಗಿ ಆಹ್ವಾನಿಸುತ್ತೇವೆ. ತಮ್ಮಿಂದಾಗುವ ಆರ್ಥಿಕ ಸಹಾಯ, ಪ್ರೋತ್ಸಾಹ, ಸ್ವಯಂಸೇವಕ ಸೇವೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಮಹತ್ಕಾರ್ಯದಲ್ಲಿ ಭಾಗಿಯಾಗುವಂತೆ ವಿನಂತಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮನೋಹರ ಅಡ್ಯಂತಾಯ, ವಿಶ್ವನಾಥ ಸನಿಲ್, ನವೀನ್ ಸಾಲ್ಯಾನ್, ಕಿರಣ್ ಪೂಜಾರಿ ಮತ್ತು ಪುರುಷೋತ್ತಮ ಸಾಲ್ಯಾನ್ ಮೂಳೂರು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago