Featured

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ – vishwanews24

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್ ಮೇಲಿನ ವೈಮಾನಿಕ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಅಫ್ಘಾನ್ ತಂಡ ಹಿಂದೆ ಸರಿದಿದೆ. ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯಬೇಕಿತ್ತು. ಆದರೀಗ ಪಾಕ್ ವಿರುದ್ಧದ ಸರಣಿಯನ್ನು ಬಹಿಷ್ಕರಿಸಲು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.

ಪಾಕಿಸ್ತಾನ್ ಸೇನೆಯು ಪಕ್ತಿಕಾ ಪ್ರಾಂತ್ಯದ ಗಡಿಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿದ್ದರು. ಈ ದಾಳಿ ಬೆನ್ನಲ್ಲೇ ಇನ್ಮುಂದೆ ಪಾಕ್ ವಿರುದ್ಧದ ಸರಣಿ ಆಡುವುದಿಲ್ಲ ಎಂದು ಅಘ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಶುಕ್ರವಾರ ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ಪಾಕ್ ಏರ್​ಫೋರ್ಸ್​ ದಾಳಿ ನಡೆಸಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ.

ಪಾಕ್ ದಾಳಿಯಿಂದಾಗಿ ದೇಶೀಯ ಕ್ರಿಕೆಟ್​ನಲ್ಲಿ ಗುರುತಿಸಿಕೊಂಡಿದ್ದ ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಮೃತಪಟ್ಟಿದ್ದಾರೆ. ಈ ದಾಳಿ ಬೆನ್ನಲ್ಲೇ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ದೃಢ ನಿರ್ಧಾರ ತೆಗೆದುಕೊಂಡಿದ್ದು, ಮುಂಬರುವ ಸರಣಿಯಲ್ಲಿ ಪಾಕ್ ಅಫ್ಘಾನ್ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

8 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

11 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

11 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

11 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

11 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

12 hours ago