ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ.
ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ.
ಇದನ್ನೂ ಓದಿ:
ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್ ಅಹಮದ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏನಿದು ಘಟನೆ?
ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ.
ಪಿಎಂಇ ಮಾಡುವ ಕಾಲಕ್ಕೆ ಅನುಮತಿ ಇಲ್ಲದೇ ತನ್ನ ಮೊಬೈಲ್‌ನಲ್ಲಿ ಮುನ್ನಿರ್ ಸತ್ತ ಮಹಿಳೆಯರ ಶವದ ಮೇಲಿನ ಬಟ್ಟೆ ತೆಗೆದು ಫೋಟೋ ತೆಗೆದುಕೊಳ್ತಿದ್ದನಂತ್ತೆ. ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿಕೊಂಡು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನಂತೆ ಆರೋಪಿ ಮುನೀರ್.
ಇದನ್ನೂ ಓದಿ:
ಕೃತ್ಯದಿಂದ ಮಹಿಳೆಯರ ಘನತೆ, ಕುಟುಂಬಸ್ಥರ ಗೌರವ, ವೈದ್ಯಕೀಯ ಗೌಪ್ಯತೆಗೆ ಧಕ್ಕೆಯಾಗಿದೆ. ಸದ್ಯ ಆರೋಪಿ ಮುನೀರ್ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 301, 62 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…