ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು ,ಮಿಸ್ ಯೂ ಮಗನೇ : ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್ – vishwanews24
ಮಿಸ್ ಯೂ ಮಗನೇ; ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ ಕೂಡ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.
ಉಡುಪಿ: ಹೃದಯಾಘಾತ – ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ – vishwanews24
ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನದ ಕುರಿತು ಹಂಚಿಕೊಂಡಿರುವ ಸ್ಟೋರಿಯಲ್ಲಿ, ನಗುಮುಖದ ರಾಕೇಶ್, ನನ್ನ ನೆಚ್ಚಿನ ವ್ಯಕ್ತಿ. ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು, ಮಿಸ್ ಯೂ ಮಗನೇ. ನಾನು ಇನ್ನೂ ಎಂದಿಂಗೂ ರಾಕೇಶ್ ಅವರನ್ನು ಮಾತನಾಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಕಷ್ಟವಾಗ್ತಿದೆ.

ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಿರುವ ಕಾರ್ಯಕ್ರಮ. ಅದರಲ್ಲಿ ರಾಕೇಶ್ ಕೂಡ ಒಬ್ಬರು. ಒಳ್ಳೆಯ ವ್ಯಕ್ತಿ, ಟ್ಯಾಲೆಂಟೆಡ್ ಕಲಾವಿದನಾಗಿದ್ರು. ನೀವೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತವಾಗಿರುತ್ತೀರಾ. ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಿನ್ನ ನಗು ಮತ್ತು ನಿನ್ನ ಸುತ್ತ ಇರುವವರನ್ನು ನಗುಸುತ್ತಿದ್ದ ರೀತಿ. ಥ್ಯಾಂಕ್ಯೂ ರಾಕೇಶ್ ಎಂದು ಬರೆದುಕೊಂಡಿದ್ದಾರೆ.
ಟೆಂಪೋ-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು – vishwanews24

