ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ’ ಎಂದು ತಿರುಗೇಟು ನೀಡಿದರು.
ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ‘ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ’ ಎಂದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…