ಮಂಗಳೂರು: ಮೆಕುನು ಚಂಡಮಾರುತ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ.
ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು, ಜನ ಆರಂಭಿಕ ಮಳೆಯಲ್ಲೇ ಪರದಾಟ ಆರಂಭಿಸಿದ್ದಾರೆ.
ಕೊಟ್ಟಾರ, ಅತ್ತಾವರದಲ್ಲಿ ನೆರೆ ನೀರು ಆವರಿಸಿ ಜನರು ಆತಂಕ ಎದುರಿಸುತ್ತಿದ್ದಾರೆ. ಇದರಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮುಂಜಾಗ್ರತೆ ವಹಿಸದ ಕಾರಣ ಜನ ಕಷ್ಟ ಎದುರಿಸುವಂತಾಗಿದೆ.
ಕೇರಳ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಮಾಹಿತಿ ತಿಳಿಸಿದ್ದಾರೆ
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…