Featured

ಮೆಕ್ಕಾದಲ್ಲಿ ತಾಪಮಾನ ಏರಿಕೆ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು ..! vishwanews24

ಮೆಕ್ಕಾದಲ್ಲಿತಾಪಮಾನ ಏರಿಕೆ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು ..!

ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ  ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು.

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ.

ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್‌ ಯಾತ್ರೆಯಲ್ಲಿ ಭಾಗವಹಿಸಿದ್ದರು, ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ರಾಜತಾಂತ್ರಿಕರು ತಿಳಿಸಿದ್ದಾರೆ.

ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಒಮ್ಮೆಯಾದರೂ ಹಜ್‌ ಯಾತ್ರೆಯನ್ನು ಪೂರ್ಣಗೊಳಿಸಬೇಕು ಎಂದು ಭಾವಿಸುತ್ತಾರೆ. ಆದ್ರೆ ಈ ಬಾರಿ ಮೆಕ್ಕಾದಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ನೂರಾರು ಜನ ಮೃತಪಟ್ಟಿದ್ದಾರೆ, ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ಕಂಡುಬಂದಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ. ತಾಪಮಾನ ಏರಿಕೆ ಸಂದರ್ಭದಲ್ಲಿ ಕೆಲವರು ಮೈಮೇಲೆ ನೀರು ಸುರಿದುಕೊಂಡು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಕಂಡುಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago