Featured

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ರಾತ್ರಿ ಸುಮಾರು 11.30ರ ವೇಳೆಗೆ ಖಾಲಿ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಬೋಗಿಯನ್ನು ಆವರಿಸಿದೆ. ಪರಿಣಾಮ ನಿಲ್ದಾಣದ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ವೇಳೆ ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಬೆಂಕಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಅವಘಡದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ – vishwanews24

ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ…

31 minutes ago

ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ – vishwanews24

ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ…

43 minutes ago

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…

2 hours ago

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…

2 hours ago

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…

2 hours ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

2 hours ago