ಬೆಂಗಳೂರು: ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ.
ಬಿಎಂಆರ್‌ಸಿಎಲ್ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.
ಇದನ್ನೂ ಓದಿ👇
ಸೋಮವಾರ(ಫೆ.2) ಕರ್ನಾಟಕ ಸರ್ಕಾರ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದು ಹೊಸ ದರ ಮುಂದಿನ ಸೋಮವಾರ(ಫೆ.9) ಜಾರಿಗೆ ಬರಲಿದೆ. ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹೆಚ್ಚಳವಾಗಲಿದೆ. ಕನಿಷ್ಠ 10 ಇರುವ ದರ 11ಕ್ಕೆ, ಗರಿಷ್ಠ 90 ಇರುವ ದರ 95ಕ್ಕೆ ಏರಿಕೆಯಾಗಲಿದೆ.
ದರ ನಿಗದಿ ಸಮಿತಿ ಕಳೆದ ವರ್ಷ 51.55% ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿತ್ತು. ಆದರೆ ಬಿಂಆರ್‌ಸಿಎಲ್ 101.5% ರಷ್ಟು ಹೆಚ್ಚಳ ಮಾಡಿ 2025ರ ಫೆ.9 ರಂದು ಜಾರಿ ಮಾಡಿತ್ತು. ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಪ್ರಯಾಣಿಕರ ಸಂಖ್ಯೆ ದಿಢೀರ್ ಕುಸಿತವಾದ ಬೆನ್ನಲ್ಲೇ ನಾಲ್ಕು ದಿನಗಳ ಬಳಿಕ ದರವನ್ನು 30% ಇಳಿಸಿತ್ತು.
ಇದನ್ನೂ ಓದಿ👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…