Featured

ಮೆಟ್ರೋ ಪ್ರಯಾಣ ದರ 5% ಏರಿಕೆ  : ಫೆ.9 ರಿಂದ ಜಾರಿಗೆ – vishwanews24

ಮೆಟ್ರೋ ಪ್ರಯಾಣ ದರ 5% ಏರಿಕೆ  : ಫೆ.9 ರಿಂದ ಜಾರಿಗೆ

ಬೆಂಗಳೂರು: ಮತ್ತೆ ನಮ್ಮ ಮೆಟ್ರೋ  ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ.

ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.

ಇದನ್ನೂ ಓದಿ👇

ಸೋಮವಾರ(ಫೆ.2) ಕರ್ನಾಟಕ ಸರ್ಕಾರ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದು ಹೊಸ ದರ ಮುಂದಿನ ಸೋಮವಾರ(ಫೆ.9) ಜಾರಿಗೆ ಬರಲಿದೆ. ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹೆಚ್ಚಳವಾಗಲಿದೆ. ಕನಿಷ್ಠ 10 ಇರುವ ದರ 11ಕ್ಕೆ, ಗರಿಷ್ಠ 90 ಇರುವ ದರ 95ಕ್ಕೆ ಏರಿಕೆಯಾಗಲಿದೆ.

ದರ ನಿಗದಿ ಸಮಿತಿ ಕಳೆದ ವರ್ಷ 51.55% ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿತ್ತು. ಆದರೆ ಬಿಂಆರ್‌ಸಿಎಲ್ 101.5% ರಷ್ಟು ಹೆಚ್ಚಳ ಮಾಡಿ 2025ರ ಫೆ.9 ರಂದು ಜಾರಿ ಮಾಡಿತ್ತು. ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಪ್ರಯಾಣಿಕರ ಸಂಖ್ಯೆ ದಿಢೀರ್‌ ಕುಸಿತವಾದ ಬೆನ್ನಲ್ಲೇ ನಾಲ್ಕು ದಿನಗಳ ಬಳಿಕ ದರವನ್ನು 30% ಇಳಿಸಿತ್ತು.

ಇದನ್ನೂ ಓದಿ👇

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago