ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿ ನಗರ ಬಿಜೆಪಿಯಿಂದ ಪಂಜಿನ ಮೆರವಣಿಗೆ -vishwanews24

Featured, ಉಡುಪಿ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೆಸ್ಕಾಂ ವೈಫಲ್ಯ ಖಂಡಿಸಿ  ಬಿಜೆಪಿಯಿಂದ ಪಂಜಿನ ಮೆರವಣಿಗೆ: ದಿನೇಶ್ ಅಮೀನ್

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೆಸ್ಕಾಂ ವೈಫಲ್ಯ ಖಂಡಿಸಿಪಂಜಿನ ಮೆರವಣಿಗೆ ಪ್ರತಿಭಟನಾ ಜಾಥ ನಡೆಸುವುದಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹೇಳಿದ್ದಾರೆ.

ಅಕ್ಟೋಬರ್ 28 ಬುಧವಾರ ಸಂಜೆ 6.30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ಆರಂಭಗೊಳ್ಳುವ ಪಂಜಿನ ಮೆರವಣಿಗೆ ಕೆ. ಎಂ. ಮಾರ್ಗವಾಗಿ ಸಾಗಿ ಡಯಾನಾ ಸರ್ಕಲ್ ನಿಂದ ಮೆಸ್ಕಾಂ ಕಚೇರಿ ಬಳಿ ಸಮಾಪನ ಗೊಳ್ಳಲಿದೆ.

ಉಡುಪಿ ಜಿಲ್ಲೆಯಾದ್ಯಂತ ನಿರಂತರ ಪವರ್ ಕಟ್, ಲೋ ವೋಲ್ಟೇಜ್ ಸಮಸ್ಯೆ,ವಿದ್ಯುತ್ ಕಣ್ಣಾಮುಚ್ಚಾಲೆ, ಟ್ರಾನ್ಸ್ ಫಾರ್ಮರ್ ಕೊರತೆ, ಕಳಪೆ ನಿರ್ವಹಣೆ, ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಮೊದಲಾದ ಸಂಸ್ಯೆಗಳಿಂದ ಜಿಲ್ಲೆಯ ಜನತೆ ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ ತಕ್ಷಣ ಮೆಸ್ಕಾಂ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿ ಜಿಲ್ಲೆಯ ಜನತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪಂಜಿನ ಮೆರವಣಿಗೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಿನೇಶ್ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply